Latest

ಪಂಜಾಬ್ ಮಾಜಿ ಸಿಎಂ ಹತ್ಯೆ ಪ್ರಕರಣ; ಅಪರಾಧಿ ಕ್ಷಮಾದಾನ ಅರ್ಜಿ ರಾಷ್ಟ್ರಪತಿ ಅಂಗಳಕ್ಕೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪಂಜಾಬ್‌ ಮಾಜಿ ಸಿಎಂ ಬಿಯಾಂತ್‌ ಸಿಂಗ್‌ ಹತ್ಯೆ ಪ್ರಕರಣದಲ್ಲಿ ಬಲವಂತ್‌ ಎಸ್‌. ರಾಜೊನಾಗೆ ವಿಧಿಸಿರುವ ಗಲ್ಲು ಶಿಕ್ಷೆಯನ್ನು ಪುನರ್‌ಪರಿಶೀಲಿಸುವ ವಿಷಯ ರಾಷ್ಟ್ರಪತಿ ಅವರ ಪರಿಗಣನೆಯಲ್ಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ನ್ಯಾಯಾಲಯಕ್ಕೆ ವಿವರಿಸಿದ್ದು, ಖಾಲಿಸ್ತಾನ ವಿಷಯಕ್ಕೆ ಸಂಬಂಧಿಸಿದಂತೆ ಬಿಯಾಂತ್‌ ಸಿಂಗ್‌ ಅವರನ್ನು ಹತ್ಯೆಮಾಡಲಾಗಿದ್ದು, ಅ‍ಪರಾಧಿ ಬಲವಂತ್ ಗೆ ಕ್ಷಮಾದಾನ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ಬಗ್ಗೆ ರಾಷ್ಟ್ರಪತಿ ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

Home add -Advt

ಬಲವಂತ ಪರ ವಾದ ಮಾಡಿದ ಹಿರಿಯ ವಕೀಲ ಮುಕುಲ್‌ ರೋಹಟಗಿ, 25 ವರ್ಷಗಳಿಂದ ಬಲವಂತ್‌ ಜೈಲಿನಲ್ಲಿದ್ದು, ಆತನ ಕ್ಷಮಾದಾನ ಅರ್ಜಿಯು ಕಳೆದ ಒಂಬತ್ತು ವರ್ಷಗಳಿಂದ ಬಾಕಿ ಉಳಿದಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬ್ಡೆ ಹಾಗೂ ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್‌ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿದ್ದು, ಪ್ರಸ್ತುತ ಸಂದರ್ಭದಲ್ಲಿ ಈ ವಿಷಯದ ಬಗ್ಗೆ ಪರಿಶೀಲನೆ ನಡೆಸಲು 6 ವಾರಗಳ ಕಾಲಾವಕಾಶ ಬೇಕು ಎಂದು ತುಷಾರ್‌ ಮೆಹ್ತಾ ತಿಳಿಸಿದ್ದಾರೆ.

ತುಷಾರ್‌ ಮೆಹ್ತಾ ಅವರ ಮನವಿಗೆ ಸ್ಪಂದಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಆರು ವಾರಗಳ ಕಾಲ ಮುಂದೂಡಿತು.

Related Articles

Back to top button