ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಸಂಬಂಧ ಟೂಲ್ ಕಿಟ್ ಶೇರ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ದಿಶಾ ರವಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಖಾಸಗಿ ಕಂಪನಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ದಿಶಾ, ದೆಹಲಿ ಪ್ರತಿಭಟನೆ ಕುರಿತ ಟೂಲ್ ಕಿಟ್ ನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಪ್ರಚೋದನೆ ನೀಡಿರುವ ಆರೋಪ ದಿಶಾ ವಿರುದ್ಧ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ದೇಶದ್ರೋಹ, ಒಳಸಂಚು ಸೇರಿದಂತೆ ವಿವಿಧ ಸೆಕ್ಷನ್ ಅಡಿ ದೆಹಲಿ ಸೈಬರ್ ಕ್ರೈಂ ಪೊಲೀಸರು ದಿಶಾ ಮೇಲೆ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ದಿಶಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ದೆಹಲಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಲು ಪ್ರತಿಭಟನೆ ನಡೆಸುವುದು, ಪ್ರತಿಭಟನೆಯಲ್ಲಿ ಪಾಲ್ಗೊಂಡು ಫೋಟೋ, ವಿಡಿಯೋ ಶೇರ್ ಮಾಡುವುದು, ಸೋಶಿಯಲ್ ಮೀಡಿಯಾ ಅಭಿಯಾನ ನಡೆಸುವ ಬಗ್ಗೆ ಇನ್ಸ್ ಟ್ರಕ್ಷನ್ಸ್ ವುಳ್ಳ ಟೂಲ್ ಕಿಟ್ ನ್ನು ದಿಶಾ ಹಂಚಿಕೊಂಡಿದ್ದರು ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ