Latest

ಪ್ರೀತಿ ನಿರಾಕರಿಸಿದ ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಿದ 50ರ ಪಾಪಿ

ಪ್ರಗತಿವಾಹಿನಿ ಸುದ್ದಿ; ದಿಸ್ಪುರ್: 33 ವರ್ಷದ ಮಹಿಳೆ ತನ್ನ ಪ್ರೇಮ ನಿವೇದನೆಯನ್ನು ನಿರಾಕರಿಸಿದ್ದಕ್ಕೆ 50 ವರ್ಷದ ವ್ಯಕ್ತಿಯೋರ್ವ ಮಹಿಳೆಯ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಅಸ್ಸಾಂ ನ ದಿಬ್ರುಗಢದಲ್ಲಿ ನಡೆದಿದೆ.

ಆರೋಪಿಯನ್ನು ಬುದ್ಧದೇವ್ ಎಂದು ಗುರುತಿಸಲಾಗಿದೆ. ಮಹಿಳೆ ತನ್ನ ಕಚೇರಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬುದ್ಧದೇವ್ ಆಕೆ ಮೇಲೆ ದಾಳಿ ನಡೆಸಿದ್ದಾನೆ.

ಬುದ್ಧದೇವ್ ಮಹಿಳೆಗೆ ತನ್ನನ್ನು ವಿವಾಹವಾಗುವಂತೆ ಕೇಳಿದ್ದಾನೆ. ಆದರೆ ಮಹಿಳೆ ನಿರಾಕರಿಸಿದ್ದಾಳೆ ಎನ್ನಲಾಗಿದೆ. ಇದೇ ಕೋಪದಿಂದ ಆಕೆಯ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಅಸ್ಸಾಂ ಮೆಡಿಕಲ್ ಕಾಲೇಜ್ ಆಂಡ್ ಹಾಸ್ಪಿಟಲ್ ಗೆ ದಾಖಲಿಸಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button