Kannada NewsLatest

ತೈಲ ಬೆಲೆ ಏರಿಕೆ ಖಂಡಿಸಿ ಕಿತ್ತೂರನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ರ್ಯಾಲಿ

ಪ್ರಗತಿವಾಹಿನಿ ಸುದ್ದಿ; ಚನ್ನಮ್ಮನ ಕಿತ್ತೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ, ತೈಲ, ಗ್ಯಾಸ್ ಬೆಲೆ ಹೆಚ್ಚಿಸಿರುವ ಸರ್ಕಾರದ ವೈಫಲ್ಯ ಖಂಡಿಸಿ ಫೆ. 18 ಕ್ಕೆ ಬೆಳಿಗ್ಗೆ 11 ಗಂಟೆಗೆ ಕಿತ್ತೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನವಲಗಟ್ಟಿ ತಿಳಿಸಿದ್ದಾರೆ.

ಪಟ್ಟಣದ ಡೊಂಬರಕೊಪ್ಪ ಪ್ರವಾಸಿ ಮಂದಿರದಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರದ ವೈಫಲ್ಯವನ್ನು ಖಂಡಿಸಿ ಇಲ್ಲಿಯ ಚನ್ನಮ್ಮಾಜಿಯ ವೃತ್ತದಿಂದ ತಹಶೀಲ್ದಾರ ಕಚೇರಿಯವರೆಗೆ ಚಕ್ಕಡಿ ಮತ್ತು ಟ್ರ್ಯಾಕ್ಟರ್ ಮೂಲಕ ರ್ಯಾಲಿ ನಡೆಸಿ ತಹಶಿಲ್ದಾರ ಅವರಿಗೆ ಮನವಿ ಸಲ್ಲಿಸಲಾಗುವುದು. ಜಿಲ್ಲಾ, ತಾಲೂಕು ಮಟ್ಟದ ಕಾಂಗ್ರೆಸ್ ಮುಖಂಡರು ಹಾಗೂ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು.

ಇದೇ ವೇಳೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನೂ ಹೆಚ್ಚು ಬಲಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು, ಒಂದಷ್ಟು ನಾಯಕರು ಪಕ್ಷಕ್ಕೆ ಹೊಸದಾಗಿ ಸೇರ್ಪಡೆಯಾಗಿದ್ದರಿಂದ ಪಕ್ಷದಲ್ಲಿ ಮೂರು ಬಣಗಳಾಗಿ ವಿಂಗಡಣೆಯಾಗಿದ್ದು, ಹಲವು ನಾಯಕರು ಹಾಗೂ ಕಾರ್ಯಕರ್ತರು ಅಸಮಾಧಾನವಾಗಿದ್ದಾರೆ ಎಂದು ಹೇಳಿದರು.

ಜಿ.ಪಂ.ಸದಸ್ಯೆ ರಾಧಾ ಕಾದ್ರೊಳ್ಳಿ, ಮಾಜಿ ಜಿ. ಪಂ. ಸದಸ್ಯ ಶಂಕರ ಹೊಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರುಣಕುಮಾರ ಬಿಕ್ಕಣ್ಣವರ, ಬಾಬಾಸಾಹೇಬ ದೇಸಾಯಿ, ಹಬೀಬ ಶಿಲೇದಾರ, ವೀಕ್ಷಕ ಜಗದೀಶ ಸಾವಂತ, ಹನೀಫ್ ಸುತಗಟ್ಟಿ, ಸಂಜೀವ ಲೋಕಾಪೂರ, ರಾಜಾಸಲಿಂ ಕಾಶಿಮ್‍ನವರ, ಮಹಾಂತೇಶ ಕಮ್ಮಾರ. ರಮೇಶ ಮೊಕಾಶಿ, ಸಾವಂತ ಕಿರಬನ್ನವರ, ಅಬ್ದುಲ್ ಮುಲ್ಲಾ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button