Latest

ಮಾಜಿ ರಾಜ್ಯಪಾಲ ರಾಮಾ ಜೋಯಿಸ್ ವಿಧಿವಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಮಾಜಿ ರಾಜ್ಯಪಾಲರು ಮತ್ತು ಹಿರಿಯ ನಿವೃತ್ತ ನ್ಯಾಯಮೂರ್ತಿಗಳೂ ಆಗಿದ್ದ ರಾಮಾ ಜೋಯಿಸ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇಂದು ಬೆಳಿಗ್ಗೆ ಬೆಂಗಳೂರಿನ ರಾಜಾಜಿನಗರ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ರಾಮಾ ಜೋಯಿಸ್ ಪತ್ನಿ, ಇಬ್ಬರು ಮಕ್ಕಳು ಮತ್ತು ಮೂವರು ಮೊಮ್ಮಕ್ಕಳನ್ನ ಅವರು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದೆ.

Home add -Advt

1931, ಜುಲೈ 27ರಂದು ಶಿವಮೊಗ್ಗದ ಅರಗ ಗ್ರಾಮದಲ್ಲಿ ಜನಿಸಿದ ರಾಮಾ ಜೋಯಿಸ್ ಕಾನೂನು ಪದವೀಧರರಾಗಿದ್ದರು. ಕಾನೂನು ಮತ್ತು ಸಂವಿಧಾನಕ್ಕೆ ಸಂಬಂಧಿಸಿದ ಅನೇಕ ಪುಸ್ತಕಗಳನ್ನ ಅವರು ರಚಿಸಿದ್ದಾರೆ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿದ್ದರು. ಪಂಜಾಬ್ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿಯೂ ಅವರು ಕಾರ್ಯನಿರ್ವಹಿಸಿದ್ದರು.

ಮಾಜಿ ರಾಜ್ಯಪಾಲ ರಾಮಾ ಜೋಯಿಸ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಸುರೇಶ್ ಕುಮಾರ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ನಮ್ಮ ನಾಡಿನ ಜ್ವಲಂತ ಸಮಸ್ಯೆಗಳು ಉದ್ಭವಿಸಿದಾಗ ಗಟ್ಟಿಯಾಗಿ ಧ್ವನಿ ಎತ್ತುತ್ತಿದ್ದರು. ರಾಜ್ಯಪಾಲರಾಗಿ, ಮುಖ್ಯ ನ್ಯಾಯಮೂರ್ತಿಗಳಾಗಿ, ರಾಜ್ಯಸಭಾ ಸದಸ್ಯರಾಗಿ ದಿವಂಗತರು ಸಮಾಜಕ್ಕೆ ಅನನ್ಯ ಸೇವೆ ಸಲ್ಲಿಸಿದ್ದರು. ಶ್ರೀಯುತರ ನಿಧನದಿಂದ ರಾಜ್ಯವು ಶ್ರೇಷ್ಠ ಮೇಧಾವಿಯೊಬ್ಬರನ್ನು ಕಳೆದುಕೊಂಡಂತಾಗಿರುವುದು ದುರ್ದೈವದ ಸಂಗತಿ. ದಿವಂಗತರ ಆತ್ಮಕ್ಕೆ ಭಗವಂತನು ಚಿರಶಾಂತಿ ನೀಡಲೆಂದು ನಾನು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಕಂಬನಿ ಮಿಡಿದಿದ್ದಾರೆ.

Related Articles

Back to top button