Latest

ನಾಯಿಯ ಮೇಲೆ ಲೈಂಗಿಕ ಕಿರುಕುಳ; ವಿಕೃತಿ ಮೆರೆದ ಕಾಮುಕ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಕಾಮುಕನೊಬ್ಬ ಹೆಣ್ಣು ನಾಯಿಗೆ ಲೈಂಗಿಕ ಕಿರುಕುಳ ನಿಡಿರುವ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದ್ದು, ಆರೋಪಿ ಯುವಕನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸೋಮಶೇಖರ್ ಎಂದು ಗುರುತಿಸಲಾಗಿದೆ. ಈತ ಫೆ.11ರಂದು ರಾತ್ರಿ ಗೋಕುಲಂ ಮೂರನೇ ಹಂತದಲ್ಲಿ ಹೆಣ್ಣುನಾಯಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ವರ್ತನೆಯನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಪೊಲೀಸರಿಗೆ ದೂರು ನಿಡಿದ್ದರು.

ಈ ಹಿನ್ನೆಲೆಯಲ್ಲಿ ಪೊಲೀಸರು ಇದೀಗ ಕಾಮುಕ ಯುವಕನ್ನು ಬಂಧಿಸಿದ್ದು, ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 1860 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಮತ್ತು 1960 (ಯು/ಇಎಸ್?-11(1)(ಎ)) ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button