ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, 9ನೇ ದಿನವಾದ ಇಂದು ಕೂಡ ಪೆಟ್ರೋಲ್, ಡೀಸೆಲ್ ದರದಲ್ಲಿ 25 ಪೈಸೆ ಏರಿಕೆಯಾಗಿದೆ.
ರಾಜ್ಯ ಹಾಗೂ ಕೇಂದ್ರಗಳು ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸಿರುವ ಸುಂಕವನ್ನು ಕಡಿತಗೊಳಿಸುವಂತೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಈಗಾಗಲೇ ಸುಂಕ ಕಡಿತಗೊಳಿಸುವುದಿಲ್ಲ ಎಂದು ಕೇಂದ್ರ ಸ್ಪಷ್ಟನೆ ನೀಡಿದೆ.
ವಿವಿಧ ನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರ ಹೀಗಿದೆ:
ಬೆಂಗಳೂರು- ಪೆಟ್ರೋಲ್ 92.54ರೂ, ಡೀಸೆಲ್ 84.75ರೂ., ದೆಹಲಿ- ಪೆಟ್ರೋಲ್ 89.54 ರೂ., ಡೀಸೆಲ್: 79.95 ರೂ. ಮುಂಬಯಿ- ಪೆಟ್ರೋಲ್ 96.00 ರೂ., ಡೀಸೆಲ್: 886.98 ರೂ. ಚೆನ್ನೈ- ಪೆಟ್ರೋಲ್ 91.68 ರೂ.,ಡೀಸೆಲ್:85.01 ರೂ ಆಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ