ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮಂಗಳೂರಿನ ಉದ್ಯಮಿಗಳಿಗೆ ಸೇರಿದ ವಿವಿಧ ಆಸ್ಪತ್ರೆ, ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಜ್ಯದ ಖ್ಯಾತ ಉದ್ಯಮಿ ಎ.ಜೆ.ಶೆಟ್ಟಿ ಅವರ ಎ.ಜೆ.ಆಸ್ಪತ್ರೆ, ವೈ.ಅಬ್ದುಲ್ಲಾ ಅವರ ಯನಪೋವಾ ಆಸ್ಪತ್ರೆ ಸೇರಿದಂತೆ ಮಂಗಳೂರು ಹಾಗೂ ಬೆಂಗಳೂರಿನ ನಿವಾಸ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಿಜೆಪಿ ಮುಖಂಡ ಹುಲಿನಾಯ್ಕರ್ ಅವರಿಗೆ ಸೇರಿದ ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನ ಮೇಲೆ ಕೂಡ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಸೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ