Latest

ಫೆ.24ರಂದು ಉದ್ಯೋಗ ಮೇಳ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ. ಫೆಬ್ರವರಿ 24ರಂದು ಕಲಬುರ್ಗಿಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ರಾಷ್ಟ್ರೀಯ ವೃತ್ತಿ ಸೇವೆ ಯೋಜನೆ ಹಾಗೂ ಮಾದರಿ ವೃತ್ತಿ ಕೇಂದ್ರದ ಅಡಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ರಾಜ್ಯದ 10ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ.

Home add -Advt

ಫೆ.24ರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ಗಂಟೆವರೆಗೆ ಉದ್ಯೋಗ ಮೇಳ ನಡೆಯಲಿದೆ. ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಫಾರ್ಮಾ, ಎಂಹೆಚ್ ಎ, ಇಂಜಿನಿಯರಿಂಗ್ ಹಾಗೂ ಪದವೀಧರ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

Related Articles

Back to top button