Latest

ಪ್ರಭುಲಿಂಗ ಸ್ವಾಮಿ ನಿಧನ

ಪ್ರಗತಿವಾಹಿನಿ ಸುದ್ದಿ, ಮೂಡಲಗಿ :

ಬುಧವಾರ ರಾತ್ರಿ ನಿಧನರಾದ ತಾಲೂಕಿನ ಯಾದವಾಡ ಗ್ರಾಮದ ಚೌಕಿ ಮಠದ ಪ್ರಭುಲಿಂಗ ಮಹಾಸ್ವಾಮಿಗಳ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.
ಯಾದವಾಡ ಗ್ರಾಮದಲ್ಲಿ ಪ್ರಭುಲಿಂಗ ಮಹಾಸ್ವಾಮಿಗಳು ಧಾರ್ಮಿಕ ವಾತಾವರಣ ಸೃಷ್ಟಿಸಿದ್ದರು. ಭಕ್ತರ ಪಾಲಿಗೆ ಮೆಚ್ಚಿನ ಗುರುಗಳಾಗಿದ್ದ ಸ್ವಾಮೀಜಿಯವರ ನಿಧನದಿಂದ ಧಾರ್ಮಿಕ ಕ್ಷೇತ್ರಕ್ಕೆ ಹಾನಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪದಲ್ಲಿ ತಿಳಿಸಿದ್ದಾರೆ.

Related Articles

Back to top button