Latest

ಕೊನೇ ಕ್ಷಣದಲ್ಲಿ ಮುರಿದು ಬಿದ್ದ ಮೈತ್ರಿ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಗಿದೆ.

ಈ ಹಿಂದೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎನ್ನಲಾಗಿತ್ತು. ಬಳಿಕ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹೇಳಲಾಗಿತ್ತು. ನಿನ್ನೆ ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದಂತೆಯೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಕಾ ಎನ್ನಲಾಗಿತ್ತು. ಆದರೆ ಇದೀಗ ಕೊನೇ ಕ್ಷಣದಲ್ಲಿ ಜೆಡಿಎಸ್ ನಡೆ ಕುತೂಹಲ ಪಡೆದುಕೊಂಡಿದೆ.

ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷವನ್ನು ಬಿಟ್ಟು ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದು, ಈ ಮೂಲಕ ಪಕ್ಷೇತರರ ಬೆಂಬಲದೊಂದಿಗೆ ಮಹಾನಗರ ಪಾಲಿಕೆ ಚುಕ್ಕಾಣಿ ಹಿಡಿಯಲು ತಂತ್ರ ಹೆಣೆದಿದೆ.

ಈ ನಡುವೆ ಮೇಯರ್ ಸ್ಥಾನಕ್ಕಾಗಿ ಜೆಡಿಎಸ್ ನಿಂದ ರುಕ್ಮಿಣಿ ಮಾದೇಗೌಡ, ಉಪಮೇಯರ್ ಸ್ಥಾನಕ್ಕೆ ಸಮೀವುಲ್ಲಾ ನಾಮಪತ್ರ ಸಲ್ಲಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button