
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅಕ್ರಮವಾಗಿ ಮಣ್ಣು ತೆಗೆಯುತ್ತಿದ್ದಾಗ ಗುಡ್ಡ ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿಯ ಬಿರನೊಳ್ಳಿ ಗ್ರಾಮದಲ್ಲಿ ನಡೆದಿದೆ.
ಅಕ್ರಮ ಮಣ್ಣು ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಯಲ್ಲಪ್ಪ (27), ಹಾಲಪ್ಪ ಗೂರವ (24) ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ.
ಮಣ್ಣಿನಡಿ ಸಿಲುಕಿದ್ದ ಎರಡೂ ಮೃತ ದೇಹಗಳನ್ನು ಹೊರತೆಗೆಯಲಾಗಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.