Latest

ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ ಎಸಿಬಿ

ಪ್ರಾಗತಿವಾಹಿನಿ ಸುದ್ದಿ; ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ಅಧಿಕಾರಿಗಳು ಬಿಬಿಎಂಪಿ ಸಹಾಯಕ ಇಂಜಿನಿಯರ್ ಎಸ್.ಎನ್.ದೇವೇಂದ್ರಪ್ಪ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ಅಮೃತನಗರದಲ್ಲಿರುವ ದೇವೇಂದ್ರಪ್ಪ ಮನೆ ಹಾಗೂ ಹಲಸೂರು ಗುಪ್ತ ಲೇಔಟ್ ನಲ್ಲಿರುವ ದೇವೇಂದ್ರಪ್ಪ ಅವರ ಆಪ್ತ ಶ್ರೀನಿವಾಸ್ ಎಂಬುವವರ ಮನೆ ಮೇಲೆ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.

Home add -Advt

ಕಟ್ಟಡ ಕಾಮಗಾರಿ ನಡೆಸಲು ದೇವೇಂದ್ರಪ್ಪ ಈ ಹಿಂದೆ ಲಂಚದ ಬೇಡಿಕೆ ಇಟ್ಟಿದ್ದರು. 20 ಲಕ್ಷ ಹಣ ಪಡೆಯುವಾಗ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದರು. ಸಧ್ಯ ದೇವೇಂದ್ರ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೀಗ ದೇವೇಂದ್ರಪ್ಪ ಅವರ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿದೆ.

 

Related Articles

Back to top button