ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಯಲಾದ ಬೆನ್ನಲ್ಲೇ ಸಚಿವರ ರಾಜೀನಾಮೆಗೆ ಒತ್ತಡಗಳು ಹೆಚ್ಚಿವೆ. ರಾಜ್ಯ ಸರ್ಕಾರಕ್ಕೆ ಆಗುವ ಮುಜುಗರದಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದೇ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಪಡೆಯುವ ಸಾಧ್ಯತೆಯಿದೆ.
ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣ ಹಿನ್ನೆಲೆಯಲ್ಲಿ ಈಗಾಗಲೇ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯುವ ವಿಚಾರವಾಗಿ ಮಹತ್ವದ ಸಭೆ ನಡೆದಿದೆ ಎಂದು ತಿಳಿದುಬಂದಿದೆ.
ಇನ್ನೊಂದೆಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಕೂಡ ಮಹತ್ವದ ಸಭೆ ಆರಂಭವಾಗಿದೆ. ಸಭೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಭಾಗವಹಿಸಿದ್ದಾರೆ. ಇದೇ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೂಡ ಭಾಗವಹಿಸಲಿದ್ದು, ಸಚಿವರ ರಾಜೀನಾಮೆ ಪಡೆಯುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಸಿಡಿ ಪ್ರಕರಣ: ರಮೇಶ್ ಕೈ ಬಿಟ್ಟು ಬಾಲಚಂದ್ರ ಜಾರಕಿಹೊಳಿಗೆ ಮಂತ್ರಿಸ್ಥಾನ?
ಮಾನ ಮರ್ಯಾದೆ ಇದ್ದರೆ ಮೊದಲು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಲಿ
ರಾಸಲೀಲೆ ಪ್ರಕರಣ ಕುರಿತು ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟೀಕರಣ
BIG NEWS: ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಬಿಡುಗಡೆ; ದೂರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ