Kannada NewsLatest

BIG NEWS: ರಮೇಶ್ ಜಾರಕಿಹೊಳಿ ರಾಜಿನಾಮೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಲೈಂಗಿಕ ಹಗರಣಕ್ಕೆ ಸಿಲುಕಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.

ಪಕ್ಷಕ್ಕೆ ಮತ್ತು ಸರಕಾರಕ್ಕೆ ಮುಜುಗರವುಂಟಾಗಬಾರದೆಂದು ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ರಾಜಿನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದಾರೆ.

ಸಿಡಿ ಪ್ರಕರಣ ಬೆನ್ನಲ್ಲೇ ರಾಜ್ಯಾದ್ಯಂತ ಸಚಿವ ರಮೇಶ್ ಜಾರಕಿಹೊಳಿ ರಾಜಿನಾಮೆಗೆ ಒತ್ತಾಯಗಳು ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸಚಿವ ರಮೇಶ್ ಜಾರಕಿಹೊಳಿ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ನಾನು ರಾಜೀನಾಮೆ ನೀಡುತ್ತಿರುವುದಾಗಿ ಹೇಳಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಪತ್ರ ರವಾನೆ ಮಾಡಿದ್ದಾರೆ.

ನನ್ನ ವಿರುದ್ಧದ ಆರೋಪಗಳಿಂದ ಮುಕ್ತನಾಗಿ ನಾನು ವಾಪಸ್ ಬಂದ ಬಳಿಕ ಮತ್ತೆ ನನಗೆ ಸಚಿವ ಸ್ಥಾನ ನೀಡಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Home add -Advt

ಇಂದೇ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೀತಾರಾ ಸಿಎಂ?

ಸಿಡಿ ಪ್ರಕರಣ: ರಮೇಶ್ ಕೈ ಬಿಟ್ಟು ಬಾಲಚಂದ್ರ ಜಾರಕಿಹೊಳಿಗೆ ಮಂತ್ರಿಸ್ಥಾನ?

ಮಾನ ಮರ್ಯಾದೆ ಇದ್ದರೆ ಮೊದಲು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಲಿ

Related Articles

Back to top button