
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಸ್ ಡಿಕ್ಕಿಯಾದ ಪರಿಣಾಮ ಪೊಲೀಸ್ ಪೇದೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ನಡೆದಿದೆ.
ರಾಮಾಚಾರಿ ಮೃತ ಪೊಲೀಸ್ ಪೇದೆ ಎಂದು ಗುರುತಿಸಲಾಗಿದೆ. ಇವರು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ವೇಗವಾಗಿ ಬಂದ ಬಿಎಂಟಿಸಿ ಬಸ್ ಪೇದೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ರಾಮಾಚಾರಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.