ಪ್ರಗತಿವಾಹಿನಿ ಸುದ್ದಿ; ಮೈಸೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಒಬ್ಬರು ಮಂತ್ರಿ ಸ್ಥಾನ ಕಳೆದುಕೊಂಡಾಗ ಖುಷಿ ಪಡುವ ವ್ಯಕ್ತಿ ನಾನಲ್ಲ. ಸತ್ಯಾಸತ್ಯತೆ ಬಗ್ಗೆ ತನಿಖೆಯಾಗಬೇಕು ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ 5 ಕೋಟಿ ರೂಪಾಯಿ ವ್ಯವಹಾರ ನಡೆದಿದೆ. ಇದರ ಹಿಂದೆ ದೊಡ್ಡ ದೊಡ್ಡವರ ಕೈವಾಡವಿದೆ ಎಂಬ ಬಗ್ಗೆ ಮಾಹಿತಿ ಇದೆ. ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುವ ನಿಟ್ಟಿನಲ್ಲಿ ತಂತ್ರ ಹೆಣೆದಿದ್ದಾರೆ. ಆ ತಂತ್ರಗಾರಿಕೆ ಸಫಲವಾಗಿದೆ. ಇದೊಂದು ಬ್ಲ್ಯಾಕ್ ಮೇಲ್ ತಂತ್ರವಾಗಿದೆ. ಅವರಿಗೆ ಸಿಡಿ ಸಿಕ್ಕಿದ್ದಾದರೂ ಹೇಗೆ ಎಂಬದು ಗೊತ್ತಿಲ್ಲ ಎಂದರು.
ಇನ್ನು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬೆನ್ನಲ್ಲೇ ಇನ್ನು ಹಲವು ರಾಜಕಾರಣಿಗಳ ಸಿಡಿ ಇದೆ ಎಂದು ಹೇಳಲಾಗುತ್ತಿದೆ. ಈ ರೀತಿ ಹೇಳಿಕೆ ನಿಡುವ ಮೂಲಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಮಾಜಿ ಸಿಎಂ ಗಳ ಸಿಡಿಯೂ ಇದೆ ಎನ್ನುತ್ತಿದ್ದಾರೆ. ಮೊದಲು ಬ್ಲ್ಯಾಕ್ ಮೇಲ್ ಮಾಡುವವರನ್ನು ಬಂಧಿಸಿ ಅವರ ಬಳಿ ಇರುವ ಮಾಹಿತಿಯನ್ನು ಪಡೆದುಕೊಳ್ಳಬೇಕು. ಸರ್ಕಾರವೇ ಆ ಮಾಹಿತಿಗಳನ್ನು ರಾಜ್ಯದ ಜನತೆ ಮುಂದೆ ಇಡಬೇಕು. ಮೊದಲು ಈ ಬ್ಲ್ಯಾಕ್ ಮೇಲ್ ತಂತ್ರ ನಿಲ್ಲಬೇಕು. ಒಂದು ಪ್ರಕರಣದಿಂದಾಗಿ ರಾಜಕಾರಣಿಗಳನ್ನು ಜನರು ತಪ್ಪಾಗಿ ನೋಡುವಂತಾಗಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ