Latest

ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ; ಹೊಸ ಬಾಂಬ್ ಸಿಡಿಸಿದ ಸಚಿವ ಯೋಗೇಶ್ವರ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ಹಿಂದೆ ಕನಕಪುರದ ಷಡ್ಯಂತ್ರವಿದೆ ಎಂದು ಹೇಳುವ ಮೂಲಕ ಸಚಿವ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯೋಗೇಶ್ವರ್, ಜಾರಕಿಹೊಳಿ ಪ್ರಕರಣದಲ್ಲಿ ರಾಜಕೀಯ ಷಡ್ಯಂತ್ರ ನಡೆದಿದೆ. ಕನಕಪುರದವರು ಯಾವ ಷಡ್ಯಂತ್ರ ಮಾಡಿದ್ದಾರೆ ಎಂಬುದು ಗೊತ್ತಿದೆ. ಮೈತ್ರಿ ಸರ್ಕಾರ ಬೀಳಿಸಿದ ಕಾರಣ ಕೆಲವರು ಷಡ್ಯಂತ್ರ ನಡೆಸಿದ್ದಾರೆ. ಅದಕ್ಕೆ ಅವರು ಮುಂದಿನ ದಿನಗಳಲ್ಲಿ ಅನುಭವಿಸಲಿದ್ದಾರೆ ಎಂದು ಗುಡುಗಿದರು.

Home add -Advt

ಇದೇ ವೇಳೆ 6 ಸಚಿವರು ಕೋರ್ಟ್ ಮೊರೆ ಹೋದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 6 ಸಚಿವರು ಯಾಕೆ ಕೋರ್ಟ್ ಮೊರೆ ಹೋಗಿದ್ದಾರೆ ಗೊತ್ತಿಲ್ಲ. ಅವರ ವೈಯಕ್ತಿಕ ರಕ್ಷಣೆಗಾಗಿ ಅವರು ನ್ಯಾಯಾಲಯದ ಮೊರೆ ಹೋಗಿರಬಹುದು ಎಂದು ಹೇಳಿದರು.

Related Articles

Back to top button