Kannada NewsKarnataka NewsLatest

Big Breaking – ರಮೇಶ ಜಾರಕಿಹೊಳಿ ವಿರುದ್ಧ ದಾಖಲಿಸಿದ್ದ ಕೇಸ್ ವಾಪಸ್

ಇಡೀ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಚಿವ  ರಮೇಶ ಜಾರಕಿಹೊಳಿ ವಿರುದ್ಧ  ಸಾಮಾಜಿಕ ಕಾರ್ಯಕರ್ತ ದಿನೇಶ ಕಲ್ಲಳ್ಳಿ ಸಲ್ಲಿಸಿದ್ದ ದೂರನ್ನು ವಾಪಸ್ ಪಡೆಯಲು ಮುಂದಾಗಿದ್ದಾರೆ.

ಈ ಕುರಿತು ತಮ್ಮ ವಕೀಲರ ಮೂಲಕ ಪೊಲೀಸ್ ಠಾಣೆಗೆ ಪತ್ರ ಕಳಿಸಿದ್ದಾರೆ ದಿನೇಶ ಕಲ್ಲಳ್ಳಿ.

ರಮೇಶ ಜಾರಕಿಹೊಳಿ ಯುವತಿಯೋರ್ವಳಿಗೆ ಕೆಲಸ ಕೊಡುವುದಾಗಿ ಹೇಳಿ ವಂಚಿಸಿದ್ದಾರೆ. ಲೈಂಗಿಕ ಶೋಷಣೆ ಮಾಡಿದ್ದಾರೆ ಎಂದು ವಿಡೀಯೋ ಸಹಿತ ದಿನೇಶ ಕಲ್ಲಳ್ಳಿ ಮಾರ್ಚ್ 2ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಸಂತ್ರಸ್ತೆ ಸಂಬಂಧಿಕರ ಮಾಹಿತಿ ಮೇರೆ ದೂರು ನೀಡಿದ್ದಾಗಿ ಹೇಳಿದ್ದರು. ಆದರೆ ಇದೀಗ ವಕೀಲರ ಸಲಹೆ ಮೇರೆಗೆ ಕೇಸ್ ವಾಪಸ್ ಪಡೆದುಕೊಳ್ಳಲು ಮುಂದಾಗಿದ್ದಾರೆ.

ಈ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದರು. ಇದರಿಂದ ಮನಸ್ಸಿಗೆ ನೋವಾಗಿ ಕೇಸ್ ವಾಪಸ್ ಪಡೆಯಲು ಮುಂದಾಗಿದ್ದಾಗಿ ದಿನೇಶ ಕಲ್ಲಳ್ಳಿ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅನೇಕ ಕಡೆ ಜಾರಕಿಹೊಳಿ ಪರ ಪ್ರತಿಭಟನೆಗಳು ನಡೆದಿದ್ದವು.

ಇನ್ನೂ 6 ಸಚಿವರು ತಮ್ಮ ವಿರುದ್ಧ ಈ ರೀತಿಯ ಮಾನಹಾನಿಕರ ಸುದ್ದಿ ಪ್ರಕಟವಾಗಬಾರದೆಂದು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲೆಲ್ಲ ಸೆಕ್ಸ್ ವಿಡೀಯೋ ಹರಿದಾಡುತ್ತಿದೆ.

BIG NEWS: ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಬಿಡುಗಡೆ; ದೂರು

ರಮೇಶ್ ಜಾರಕಿಹೊಳಿ ಕಾನೂನು ಕೈಗೆ ಸಿಗೋದು ಡೌಟ್, ಆದರೆ….

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button