
ಮಹಿಳಾ ಸರ್ಕಾರಿ ನೌಕರರಿಗೆ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ವಿವಿಧ ಯೋಜನೆಗಳಿಗಾಗಿ 37,188 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
* ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ
* ಮಹಿಳಾ ಉದ್ಯಮಿಗಳಿಗೆ ಶೇ.4ರ ಬಡ್ದಿದರದಲ್ಲಿ 2 ಕೋಟಿ ರೂ.ಸಾಲ
* ಹಪ್ಪಳ, ಉಪ್ಪಿನಕಾಯಿ ತಯಾರಿಕೆಗೆ ಆನ್ ಲೈನ್ ನಲ್ಲಿ ಮಾರುಕಟ್ಟೆ ಒದಗಿಸಲು ಕ್ರಮ
* ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗಾಗಿ ರಿಯಾಯಿತಿ ಪಾಸ್
* ನಿರ್ಭಯಾ ಯೋಜನೆಯಡಿ ಬೆಂಗಳೂರಿನಲ್ಲಿ 7,500 ಸಿಸಿ ಕ್ಯಾಮರಾ ಅಳವಡಿಕೆ
* ಎಲಿವೇಟ್ ವುಮನ್ ಎಂಟರ್ ಪ್ರನ್ಯೂರ್ ಶಿಪ್ ಯೋಜನೆ ಜಾರಿಗೆ ಕ್ರಮ
* ಮಹಿಳಾ ಸರ್ಕಾರಿ ನೌಕರರಿಗೆ ಈಗಿರುವ ಪ್ರಸೂತಿ ರಜೆ 6 ತಿಂಗಳು ಜೊತೆಗೆ ಸೇವಾವಧಿಯಲ್ಲಿ 6 ತಿಂಗಳು ಮಕ್ಕಳ ಆರೈಕೆ ರಜೆ
* ಮಹಿಳಾ ಪರ ಚಿಂತನೆ ಜಾರಿಗೊಳಿಸಲು ಸಿಎಂ ಮೇಲ್ವಿಚಾರಣೆಯಲ್ಲಿ ಮಹಿಳಾ ಸಬಲೀಕರಣ ಅಭಿಯಾನ
* ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಗೋದಾಮು-ಅಂಗಡಿ ನೀಡುವಲ್ಲಿ ಶೇ.10 ರಷ್ಟು ಮೀಸಲು