![](https://pragativahini.com/wp-content/uploads/2020/03/Ramesh-Jarkiholi.jpg)
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಸಿಡಿ ಪ್ರಕರಣದಲ್ಲಿ ಸಿಲುಕಿ ಸಚಿವಸ್ಥಾನ ಕಳೆದುಕೊಂಡಿರುವ ಶಾಸಕ ರಮೇಶ ಜಾರಕಿಹೊಳಿ ನಾಳೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಮಾ.2ರಂದು ರಮೇಶ ಜಾರಕಿಹೊಳಿ ಯುವತಿಯೊಂದಿಗೆ ರಾಸಲೀಲೆ ಮಾಡುತ್ತಿರುವ ವಿಡಿಯೋ ಬಹಿರಂಗವಾಗಿ ಭಾರಿ ಸುದ್ದಿಯಾಗಿತ್ತು. ಈ ಕುರಿತು ಸಾಮಾಜಿಕ ಕಾರ್ಯಕರ್ತ ದಿನೇಶ ಕಲ್ಲಳ್ಳಿ ಪೊಲೀಸ್ ದೂರನ್ನು ಸಹ ದಾಖಲಿಸಿದ್ದರು. ಯುವತಿಗೆ ಕೆಲಸ ಕೊಡಿಸುವುದಾಗಿ ಹೇಳಿ ಲೈಂಗಿಕ ಶೋಷಣೆ ಮಾಡಲಾಗಿದೆ ಎಂದು ದೂರಲಾಗಿತ್ತು.
ಆದರೆ ಇದು ನಕಲಿ ಸಿಡಿ ಎಂದು ರಮೇಶ ಜಾರಕಿಹೊಳಿ ಹೇಳಿದ್ದರು. ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಕೂಡ ಇದು ನಕಲಿ ಸಿಡಿ ಎಂದು ಹೇಳಿದ್ದಲ್ಲದೆ ಪ್ರಕರಣ ಕುರಿತು ಸಿಬಿಐ ತನಿಖೆಗೆ ಆಗ್ರಹಿಸಿದ್ದರು.
ರಮೇಶ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಸಲೆಂದೇ ನಕಲಿ ಸಿಡಿ ತಯಾರಿಸಲಾಗಿತ್ತು ಎಂದು ಆರೋಪಿಸಿದ್ದರು. ಅಲ್ಲದೆ ರಮೇಶ ಜಾರಕಿಹೊಳಿ ಮನೆಯಿಂದ ಹೊರಗೆಬರಬೇಕೆೆಂದು ಬಾಲಚಂದ್ರ ಜಾರಕಿಹೊಳಿ ಒತ್ತಾಯಿಸಿದ್ದರು. ಇದು ಹನಿಟ್ರ್ಯಾಪ್ ಎಂದೂ ಕೆಲವರು ಪ್ರತಿಕ್ರಿಯಿಸಿದ್ದರು.
ಈ ಪ್ರಕರಣದಲ್ಲಿ 5 ಕೋಟಿ ರೂ. ಕೈ ಬದಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದರು. ಇದರಿಂದ ಮನನೊಂದು ದಿನೇಶ ಕಲ್ಲಳ್ಳಿ ಪ್ರಕರಣ ವಾಪಸ್ ಪಡೆದಿದ್ದರು.
ಇದೀಗ ರಮೇಶ ಜಾರಕಿಹೊಳಿ ಪತ್ರಿಕಾಗೋಷ್ಠಿ ನಡೆಸಲು ನಿರ್ಧರಿಸಿದ್ದಾರೆ. ಮಂಗಳವಾರ ಬೆಳಗ್ಗೆ 9.30ಕ್ಕೆ ಅವರು ಪತ್ರಿಕಾಗೋಷ್ಠಿ ನಡೆಸಲಿದ್ದು, ಕುತೂಹಲ ಮೂಡಿಸಿದೆ.
ರಮೇಶ್ ವಿರುದ್ಧ ಷಡ್ಯಂತ್ರ; ಸಿಡಿಗೆ 15 ಕೋಟಿ ಖರ್ಚು; ಬಾಲಚಂದ್ರ ಜಾರಕಿಹೊಳಿ
BIG NEWS: ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಬಿಡುಗಡೆ; ದೂರು
BIG NEWS: ರಮೇಶ್ ಜಾರಕಿಹೊಳಿ ರಾಜಿನಾಮೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ