ಪ್ರಗತಿವಾಹಿನಿ ಸುದ್ದಿ, ಶ್ರೀಗರ :
ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಂದ್ವಾರಾ ಬಳಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಮೂರು ದಿನಗಳಿಂದ ಉಗ್ರರನ್ನು ಹತ್ಯೆ ಮಾಡಲು ಯೋಧರು ಕಾರ್ಯಾಚರಣೆ ನಡೆಸುತ್ತಿದ್ದರು. ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಂದ್ವಾರಾ ಬಳಿಯ ಬಾಬಾಗುಂದ್ ಪ್ರದೇಶದ ಮನೆಯೊಂದರಲ್ಲಿ ಉಗ್ರರು ಅಡಗಿದ್ದರು. ಈ ವೇಲೆ ನಡೆದ ಎನ್ ಕೌಂಟರ್ ನಲ್ಲಿ ನಾಲ್ಕು ಯೋಧರು ಹುತಾತ್ಮರಾಗಿದ್ದಾರೆ.
ಕಳೆದ ಮೂರು ದಿನಗಳಿಂದಲೂ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿತ್ತು. ಗುಂಡಿನ ಚಕಮಕಿಯಲ್ಲಿ 9 ಜನರು ಗಾಯಗೊಂಡಿದ್ದು, ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಕಳೆದ 60 ಗಂಟೆಗಳಲ್ಲಿ ಕಾಶ್ಮೀರದ ಪೂಂಚ್, ರಜೌರಿ, ಕುಪ್ವಾರ ಜಿಲ್ಲೆಗಳಲ್ಲಿ ನಿರಂತರವಾಗಿ ಪಾಕಿಸ್ತಾನ ಶೆಲ್ ದಾಳಿ ನಡೆಸುತ್ತಿದೆ. ಗಡಿ ಭಾಗದಲ್ಲಿರುವ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.