Latest

1-5ನೇ ತರಗತಿ ಆರಂಭಿಸಿರುವ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ

ಪ್ರಗತಿವಾಹಿನಿ ಸುದ್ದಿ; ಕೋಲಾರ: ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 1ರಿಂದ 5ನೇ ತರಗತಿ ಪ್ರಾರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

10 ದಿನಗಳ ಹಿಂದೆ ಸೋಂಕಿತರ ಸಂಖ್ಯೆ 350ಕ್ಕೆ ಇಳಿಕೆಯಾಗಿತ್ತು. ಆದರೆ ಈಗ 700ಕ್ಕೆ ಏರಿಕೆಯಾಗಿದೆ. ಮಕ್ಕಳ ಹಿತದೃಷ್ಟಿಯಿಂದ, ಯೋಗಕ್ಷೇಮಕ್ಕಾಗಿ ಸರ್ಕಾರ ಶೈಕ್ಷಣಿಕ ವರ್ಷ ಆರಂಭಿಸಿಲ್ಲ. ಕೆಲ ಖಾಸಗಿ ಶಾಲೆಗಳು 1-5ನೇ ತರಗತಿ ಆರಂಭಿಸಿರುವ ಬಗ್ಗೆ ಮಾಹಿತಿ ಇದೆ. ಅಂತಹ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Home add -Advt

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆತಂಕವಿದೆ. ಕೇರಳ, ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯದಲ್ಲೀ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ ಎಂದು ಹೇಳಿದರು.

Related Articles

Back to top button