ಯಾರದ್ದೂ ಹೆಸರು ಉಲ್ಲೇಖವಿಲ್ಲ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಆಪ್ತ, ಮಾಜಿ ಶಾಸಕ ಎಂ.ವಿ. ನಾಗರಾಜ್ ಮೂಲಕ ದೂರು ದಾಖಲಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಿಡಿ ಪ್ರಕರಣದ ವಿರುದ್ಧ ಮಾಜಿ ಶಾಸಕ ನಾಗರಾಜ್, ರಮೇಶ್ ಜಾರಕಿಹೊಳಿ ಪರವಾಗಿ ಲಿಖಿತ ದೂರು ದಾಖಲಿಸಿದ್ದು, ನಕಲಿ ಸಿಡಿ ತಯಾರಿಸಿ ತಮ್ಮನ್ನು ಬ್ಲ್ಯಾಕ್ ಮೇಲ್ ಮಾಡಿ ತೇಜೋವಧೆ ಮಾಡಲಾಗಿದೆ ಎಂದು ರಮೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇನ್ನು ಸಿಡಿಯಲ್ಲಿರುವುದು ತಾನಲ್ಲ ಎಂದು ಹೇಳಿರುವ ರಮೇಶ್ ಜಾರಕಿಹೊಳಿ, ವಕೀಲರ ಸಲಹೆ ಮೇರೆಗೆ ಯಾರ ವಿರುದ್ಧವೂ ದೂರು ನೀಡಿಲ್ಲ ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಈಗ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ಸಿಕ್ಕಿದ್ದು, ಎಫ್ಐಆರ್ ದಾಖಲಿಸಿಕೊಂಡು ಎಸ್ಐಟಿ ತನಿಖೆಯನ್ನು ಚುರುಕುಗೊಳಿಸಬಹುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ