ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಶಿವಸೇನೆ ಹಾಗೂ ಕರವೇ ಕಾರ್ಯಕರ್ತರ ಸಂಘರ್ಷ ಮುಂದುವರೆದಿದ್ದು, ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಾಲಯದ ಮೇಲೆ ಕನ್ನಡ ಪರ ಹೋರಾಟಗಾರರು ದಾಂಧಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ಶಿವಸೇನೆ ವಕ್ತಾರ ಸಂಜಯ್ ರಾವತ್, ಕರ್ನಾಟಕ ಸರ್ಕಾರ ಕ್ರಮಕ್ಕೆ ಮುಂದಾಗದಿದ್ದರೆ ನಮ್ಮ ಸರ್ಕಾರವೇ ಬೆಳಗಾವಿಗೆ ಬರಲಿದೆ ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಮರಾಠಿಗರಿಗೆ ಅನ್ಯಾಯವಾಗುತ್ತಿದೆ. ಅಲ್ಲಿನ ಸರ್ಕಾರ ಇದರ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಮಹಾರಾಷ್ಟ್ರ ಸರ್ಕಾರ ಸುಮ್ಮನೆ ಕೂರುವುದಿಲ್ಲ. ಸಾಂಗ್ಲಿ, ಕೊಲ್ಹಾಪುರ ಜಿಲ್ಲೆಯ ಹೆಚ್ಚಿನ ಜನ ಬೆಳಗಾವಿಗೆ ಹೋಗುತ್ತಿದ್ದಾರೆ. ಅವರಿಗೆ ಏನಾದರೂ ತೊಂದರೆಯಾಗಿ ಪರಿಸ್ಥಿತಿ ಹದಗೆಟ್ಟರೆ ಮುಂದಾಗುವ ಪರಿಣಾಮಕ್ಕೆ ಮಾಹಾರಾಷ್ಟ್ರ ಸರ್ಕಾರವಾಗಲಿ, ಶಿವಸೇನೆಯಾಗಲಿ ಜವಾಬ್ದಾರಿ ಅಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಶಿವಸೇನೆ ಕಾರ್ಯಾಲಯದ ಮೇಲೆ ಕನ್ನಡ ಪರ ಹೋರಾಟಗಾರರು ದಾಂಧಲೆ ನಡೆಸಿದ್ದಾರೆ. ಕರ್ನಾಟಕ ಸರ್ಕಾರ ಹಾಗೂ ಬೆಳಗಾವಿ ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಪರಿಸ್ಥಿತಿ ಕೈಮೀರಲಿದೆ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ