ಪ್ರಗತಿವಾಹಿನಿ ಸುದ್ದಿ; ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ನಿವಾಸದ ಎದುರು ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು, ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಜೆಯನ್ನು ಬಂಧಿಸಿದ್ದಾರೆ.
ವಿಚಾರಣೆ ವೇಳೆ ಸ್ಫೋಟಕ ಇಟ್ಟಿದ್ದ ತಂಡದಲ್ಲಿ ಸಚಿನ್ ವಜೆ ಕೂಡ ಭಾಗಿಯಾಗಿದ್ದು, ಈ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ. ಬಳಿಕ ವಜೆಯನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಎನ್ ಕೌಂಟರ್ ಸ್ಪೆಷಲಿಸ್ಟ್ ಆಗಿದ್ದ ವಜೆ ಅಂಬಾನಿ ನಿವಾಸದ ಎದುರು ಸ್ಫೋಟಕ ಇರಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಫೆ.25ರಂದು ದಕ್ಷಿಣ ಮುಂಬೈನ ಕಾರ್ಮಿಚೇಲ್ ರಸ್ತೆಯಲ್ಲಿರುವ ಅಂಬಾನಿ ಮನೆಯ ಮುಂದೆ ಸ್ಫೋಟಕ ತುಂಬಿದ್ದ ಕಾರೊಂದು ಪತ್ತೆಯಾಗಿತ್ತು. ಈ ಕಾರನ್ನು ನಿರ್ವಹಿಸುತ್ತಿದ್ದ ಮನ್ ಸುಖ್ ಹಿರೇನ್ ಅವರ ಮೃತದೇಹ ಪತ್ತೆಯಾಗಿತ್ತು. ಘಟನೆ ಹಿಂದೆ ಸಚಿನ್ ವಜೆ ಕೈವಾಡ ಇದೆ ಎಂದು ಮನ್ ಸುಖ್ ಪತ್ನಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ವಜೆಯನ್ನು ವಿಚಾರಣೆ ನಡೆಸಲಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ