ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ತೂಫಾನ್ ಜೀಪ್ ಬ್ರೇಕ್ ಫೇಲ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಜನರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವನಗೂಲ್ ನಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಏಕಾಏಕಿ ವಾಹನದ ಬ್ರೇಕ್ ಫೇಲ್ ಆಗಿ ರಸ್ತೆ ಬದಿಗೆ ಡಿಕ್ಕಿ ಹೊಡೆದಿದೆ. ವಾಹನದಲ್ಲಿದ್ದ 13 ಮಂದಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ