ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಎಸ್ ಐಟಿ ತನಿಖೆ ಚುರುಕುಗೊಳಿಸಿದ್ದು, ಇನ್ನೊಂದೆಡೆ ವಿಡಿಯೋದಲ್ಲಿ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಕನ್ನಡಿಗರ ರಕ್ಷಣಾ ವೇದಿಕೆಯಿಂದ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ರಮೇಶ್ ಜಾರಕಿಹೊಳಿ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಕನ್ನಡಿಗರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ ವಜಾಮಾಡಬೇಕು ಎಂದು ಕನ್ನಡಿಗರ ರಕ್ಷಣಾ ವೇದಿಕೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಒಟ್ಟಾರೆ ರಮೇಶ್ ಜಾರಕಿಹೊಳಿ ವಿರುದ್ಧ ಇದೀಗ ದೂರು ದಾಖಲಾದಂತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ