ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಬೆಳಗಾವಿ ಲೋಕಸಭೆ ಸೇರಿದಂತೆ ರಾಜ್ಯದ 3 ಉಪಚುನಾವಣೆಗಳ ದಿನಾಂಕ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಸಂಪೂರ್ಣ ಜಿಲ್ಲೆಯಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಾಗಿದೆ.
ಏಪ್ರಿಲ್ 17ರಂದು ಬೆಳಗಾವಿ ಲೋಕಸಭೆ ಹಾಗೂ ಬಸವಕಲ್ಯಾಣ ಮತ್ತು ಮಸ್ಕಿ ಚುನಾವಣೆ ಸಹ ನಡೆಯಲಿದೆ. ಸಿಂದಗಿ ಕ್ಷೇತ್ರದ ಚುನಾವಣೆ ಘೋಷಣೆಯಾಗಿಲ್ಲ.
ತಕ್ಷಣದಿಂದಲೇ ಇಡೀ ಜಿಲ್ಲೆಯಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ.
ಮಾ.23ರಂದು ಚುನಾವಣೆ ನೋಟಿಫಿಕೇಶನ್ ಹೊರಬೀಳಲಿದೆ. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ. 31ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 3 ಅಂತಿಮ ದಿನ. ಏ.17, ಶನಿವಾರ ಮತದಾನ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ. ಮೇ. 4ರಂದು ನೀತಿ ಸಂಹಿತೆ ಮುಕ್ತಾಯವಾಗಲಿದೆ.
ಚುನಾವಣೆ ಅಧಿಸೂಚನೆ ಇಲ್ಲಿದೆ – 16.03.2021 Schedule for bye-elections in PCs and ACs of various States (1)
ಬೆಳಗಾವಿ ಲೋಕಸಭೆ ಸೇರಿ ಉಪಚುನಾವಣೆ ದಿನಾಂಕ ಪ್ರಕಟ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ