ಪ್ರಗತಿವಾಹಿನಿ ಸುದ್ದಿ; ನವದೆಹಲಿ: 2019-20ನೇ ಸಾಲಿನಲ್ಲಿ ಯೋಜನೆಯ ಮೂರನೇ ಹಂತದ ಅಡಿಯಲ್ಲಿ ಕರ್ನಾಟಕದಲ್ಲಿ ನಾಲ್ಕು ವೈದ್ಯಕೀಯ ಕಾಲೇಜುಗಳನ್ನು ಅನುಮೋದಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ ಹೇಳಿದರು.
ಮಂಗಳವಾರ (ಮಾ 16) ರಂದು ಸಂಸತ್ತಿನ ರಾಜ್ಯಸಭೆಯಲ್ಲಿ ಸಂಸದರಾದ ಈರಣ್ಣ ಕಡಾಡಿ ಅವರು ಕೇಳಿದ ಪ್ರಶ್ನೆಗೆ ಅವರು ಲಿಖಿತ ಉತ್ತರಿಸಿದ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅಸ್ತಿತ್ವದಲ್ಲಿರುವ ಜಿಲ್ಲಾ ಆಸ್ಪತ್ರೆಗಳೊಂದಿಗೆ ಜೋಡಿಸಲಾದ ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗಾಗಿ ಕೇಂದ್ರ ಪ್ರಾಯೋಜಿತ ಯೋಜನೆಯನ್ನು ನಿರ್ವಹಿಸುತ್ತದೆ ಎಂದರು. ತಲಾ 150 ಎಂಬಿಬಿಎಸ್ ಸೀಟುಗಳ ಸಾಮರ್ಥ್ಯದೊಂದಿಗೆ ಚಿಕ್ಕಮಗಳೂರು, ಹಾವೇರಿ, ಯಾದಗಿರಿ ಮತ್ತು ಚಿಕ್ಕಬಳ್ಳಾಪುರದಲ್ಲಿ ಸ್ಥಾಪಿಸಲಾಗಿದೆ.
ಕೇಂದ್ರ ಮತ್ತು ಕರ್ನಾಟಕ ರಾಜ್ಯ ಸರ್ಕಾರದ ನಡುವೆ 60:40 ಅನುಪಾತದಲ್ಲಿ ಹಂಚಿಕೊಳ್ಳಲು ವೈದ್ಯಕೀಯ ಕಾಲೇಜುಗಳಿಗೆ ತಲಾ ಒಟ್ಟು 325 ಕೋಟಿ ರೂ. ನಿಧಿಯ ಬಿಡುಗಡೆ ಮಾಡಲಾಗಿದೆ. ಇದಲ್ಲದೆ, ರಾಜ್ಯಗಳೊಂದಿಗಿನ ಸಭೆಗಳನ್ನು ವಿವಿಧ ಹಂತಗಳಲ್ಲಿ ನಿಯಮಿತವಾಗಿ ನಡೆಸಲಾಗುತ್ತದೆ. ವೈದ್ಯಕೀಯ ಕಾಲೇಜುಗಳ ನಿರ್ಮಾಣ, ನಿಧಿಯ ಬಳಕೆಯ ವಿ?ಯದಲ್ಲಿ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಿ ಮತ್ತು ಕಾಲೇಜುಗಳನ್ನು ಕ್ರಿಯಾತ್ಮಕಗೊಳಿಸಲಾಗುತ್ತಿದೆ ಎಂದು ಉತ್ತರ ನೀಡಿದರು.
ಪ್ರತಿದಿನ ಕರ್ನಾಟಕ, ಮಹಾರಾ? ಮತ್ತು ಗೋವಾದ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಇನ್ಸಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಬಿಮ್ಸ್) ನಲ್ಲಿ ಕ್ಯಾನ್ಸರ್ ಸಂಶೋಧನಾ ಸಂಸ್ಥೆಯನ್ನು ಸ್ಥಾಪಿಸಬೇಕೆಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ತಿರ್ಮಾನಿಸಲಾಗುವುದು ಎಂದು ಉತ್ತರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ