ಪ್ರಗತಿವಾಹಿನಿ ಸುದ್ದಿ; ತುಮಕೂರು: ಜುಲೈ 15ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವ ಚಿಂತನೆ ನಡೆದಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಕೊರೊನಾ ಎರಡನೇ ಅಲೆ ಶುರುವಾಗಿದೆ. ಅದನ್ನೂ ಗಮನದಲ್ಲಿರಿಸಿಕೊಳ್ಳಬೇಕು. ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ಕುರಿತು ಆಗ್ರಹ ಇದೆ. ಈ ಬಗ್ಗೆಯೂ ನಿರ್ಧಾರ ಕೈಗೊಳ್ಳಬೇಕಿದೆ ಎಂದರು.
ಮಾರ್ಚ್ 1ರಿಂದ 1-5ನೇ ತರಗತಿ ಆರಂಭಿಸುವ ಬಗ್ಗೆ ಇಚ್ಛೆ ಇತ್ತು. ಆದರೆ ಕೊರೊನಾ ಕಾರಣದಿಂದಾಗಿ ಸಧ್ಯಕ್ಕೆ ಬೇಡ ಎಂಬ ಅಭಿಪ್ರಾಯಕ್ಕೆ ಬಂದೆ. ಖಾಸಗಿ ಶಾಲೆಗಳು 1-5ನೇ ತರಗತಿ ಆರಂಭಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ