ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸ್ಫೋಟದ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಉಪಚುನಾವಣೆ ದಿನಾಂಕ ಘೋಷಣೆಯಾಗಿರುವುದು ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. ರಮೇಶ್ ಜಾರಕಿಹೊಳಿಗೆ ಚುನಾವಣಾ ಉಸ್ತುವಾರಿಯಿಂದ ಕೊಕ್ ನೀಡಲಾಗುತ್ತಿದೆ.
ಸಿಡಿ ಬಿಡುಗಡೆಗೂ ಮುನ್ನ ಬಿಜೆಪಿ ಸಹಜವಾಗಿ ರಮೇಶ್ ಜಾರಕಿಹೊಳಿಗೆ ಚುನಾವಣಾ ಉಸ್ತುವಾರಿ ನೀಡಿತ್ತು. ಆದರೆ ಈಗ ಮುಜುಗರದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಲೋಕಸಭಾ ಉಪಚುನಾವಣೆಗೆ ಪರ್ಯಾಯ ನಾಯಕತ್ವ ಹುಡುಕಾಟದಲ್ಲಿ ಬಿಜೆಪಿ ತೊಡಗಿದೆ. ಕಾಂಗ್ರೆಸ್ ಸಿಡಿ ಪ್ರಕರಣವನ್ನೇ ಅಸ್ತ್ರವನ್ನಾಗಿ ಬಳಸಿಕೊಂಡು ಪ್ರಚಾರದ ವೇಳೆ ಬಿಜೆಪಿ ಹಣಿಯಲು ಸಿದ್ಧತೆ ನಡೆಸಿದೆ. ಹೀಗಾಗಿ ಅನಿವಾರ್ಯವಾಗಿ ಉಸ್ತುವಾರಿ ಬದಲಾವಣೆಗೆ ಬಿಜೆಪಿ ಮುಂದಾಗಿದೆ. ಡಿಸಿಎಂ ಲಕ್ಷ್ಮಣ ಸವದಿ, ಉಮೇಶ್ ಕತ್ತಿ ಅಥವಾ ಸಿಎಂ ಪುತ್ರ ವಿಜಯೇಂದ್ರ ಹೆಸರು ಮುಂಚೂಣಿಯಲ್ಲಿದೆ.
ಆದರೆ ಹಲವರು ರಮೇಶ್ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕಿಹೊಳಿಗೆ ಚುನಾವಣಾ ಉಸ್ತುವಾರಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕಾರಣ ಬೆಳಗಾವಿಯಲ್ಲಿ ಜಾರಕಿಹೊಳಿ ಬ್ರದರ್ಸ್ ತಮ್ಮದೇ ವರ್ಚಸ್ಸು ಹೊಂದಿದ್ದು, ಈಗ ಲೋಕಸಭಾ ಉಪಚುನಾವಣೆ ವೇಳೆ ಅವರನ್ನು ಕೈಬಿಟ್ಟರೆ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಹೀಗಾಗಿ ಬಾಲಚಂದ್ರ ಜಾರಕಿಹೊಳಿಗೆ ಉಸ್ತುವಾರಿ ನೀಡುವಂತೆ ಹಲವರು ಸಲಹೆ ನೀಡಿದ್ದಾರೆ.
ಬೆಳಗಾವಿ ಉಪಚುನಾವಣೆ: ರಮೇಶ ಜಾರಕಿಹೊಳಿ ಕನಸು ನನಸಾಗಲಿದೆಯೇ?
ಬೆಳಗಾವಿ ಉಪಚುನಾವಣೆ; ಬಿಜೆಪಿ ಟಿಕೆಟ್ ಪೈಪೋಟಿಯಲ್ಲಿ ನಾಲ್ವರು ವೈದ್ಯರು
ಬೆಳಗಾವಿ ಟಿಕೆಟ್: ಸೋಮವಾರದವರೆಗೂ ಸೀಕ್ರೆಟ್
ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ