
ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ಸಾಗುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಬ್ಯಾಂಕ್ ಮ್ಯಾನೇಜರ್ ಡಿ.ಎಸ್.ಬಿರಾದಾರ್ ಹಾಗೂ ಕ್ಯಾಷಿಯರ್ ಚೈತನ್ಯ ಕುಮಾರ್ ಎಂದು ಗುರುತಿಸಲಾಗಿದೆ.
ಘಟನೆ ಬೆನ್ನಲ್ಲೇ ಸರ್ಕಾರಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.