Latest

ಸಿಡಿ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ ಯುವತಿಯ ಬಾಯ್ ಫ್ರೆಂಡ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಬಾಯ್ ಫ್ರೆಂಡ್ ಆಕಾಶ್ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತ ಹೇಳಿಕೆ ದಾಖಲಿಸಿದ್ದಾರೆ.

ಸೆಕ್ಷನ್ 164 ಸಿಆರ್ ಪಿಸಿ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ತಿಳಿಸಿದ್ದಾರೆ ಎನ್ನಲಾಗಿದ್ದು, ಸಿಡಿ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ.

Home add -Advt

ಆಕಾಶ್ ಹೇಳಿಕೆ ಮುಚ್ಚಿದ ಲಕೋಟೆಯಲ್ಲಿದ್ದು, ಚಾರ್ಜ್ ಶೀಟ್ ಬಳಿಕ ಕೋರ್ಟ್ ಗೆ ಕಳುಹಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಸಿಡಿ ಪ್ರಕರಣ; 4 ಗಂಟೆ, 56 ಪ್ರಶ್ನೆ; ಎಸ್ ಐಟಿಯಿಂದ ರಮೇಶ್ ಜಾರಕಿಹೊಳಿ ವಿಚಾರಣೆ

Related Articles

Back to top button