Kannada NewsKarnataka NewsLatest

ಸತೀಶ್ ಜಾರಕಿಹೊಳಿ ಭಾನುವಾರ ದೆಹಲಿಗೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಲಿರುವ ಸತೀಶ್ ಜಾರಕಿಹೊಳಿ ಭಾನುವಾರ ನವದೆಹಲಿಗೆ ತೆರಳಲಿದ್ದಾರೆ.

ಸತೀಶ್ ಜಾರಕಿಹೊಳಿ ಅವರ ಹೆಸರನ್ನು ರಾಜ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಶಿಫಾರಸ್ಸು ಮಾಡಿದೆ. ಶನಿವಾರ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಸತೀಶ್ ಜಾರಕಿಹೊಳಿ ಅವರ ಏಕೈಕ ಹೆಸರನ್ನು ಹೈಕಮಾಂಡ್ ಗೆ ಕಳಿಸಿದ್ದಾರೆ. ಹೈಕಮಾಂಡ್ ಅಧಿಕೃತವಾಗಿ ಘೋಷಿಸಬೇಕಿದೆ. ಸತೀಶ್ ಅವರ ಹೆಸರನ್ನು ಅಂತಿಮಗೊಳಿಸುವುದು ಬಹುತೇಕ ಖಚಿತ.

Home add -Advt

ಈ ಹಿನ್ನೆಲೆಯಲ್ಲಿ ಅವರು ನವದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಲಿದ್ದಾರೆ. ಜೊತೆಗೆ ಚುನಾವಣೆ ಸಿದ್ಧತೆ ಕುರಿತೂ ಚರ್ಚಿಸುವ ಸಾಧ್ಯತೆ ಇದೆ. ಚುನಾವಣೆ ಪ್ರಚಾರಕ್ಕೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸುವ ನಿರೀಕ್ಷೆ ಕೂಡ ಇದೆ.

ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಅಂತಿಮ: ಅಧಿಕೃತ ಘೋಷಣೆಯಷ್ಟೆ ಬಾಕಿ

ಬೆಳಗಾವಿ ಬೈಎಲೆಕ್ಷನ್; ಪಕ್ಷ ಹೇಳಿದರೆ ಸ್ಪರ್ಧೆ ಎಂದ ಸತೀಶ್ ಜಾರಕಿಹೊಳಿ

ಉತ್ತರ ಕರ್ನಾಟಕದಲ್ಲಿ ಪ್ರಬಲ ತಂಡ ಸನ್ನದ್ಧ

 

Related Articles

Back to top button