ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಮನೆಯ ಹೊರಗಡೆ ನಿಲ್ಲಿಸಲಾಗಿದ್ದ ಕಾರು, ಬೈಕ್ ಗಳು ಏಕಾಏಕಿ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ.
ಗೋಕಾಕ್ ನ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಈ ಅವಘಡ ಸಂಭವಿಸಿದೆ. ಮನೆಯ ಮುಂದೆ ನಿಲ್ಲಿಸಿದ್ದ ಮೂರು ಕಾರು ಹಾಗೂ ಬೈಕ್ ಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಶಹಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ