ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತ್ತು ರಾಜ್ಯದ 2 ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಮಂಗಳವಾರ ಆರಂಭವಾಗಲಿದೆ.
ಈ ಸಂಬಂಧ ಇಂದು ಅಧಿಸೂಚನೆ ಹೊರಬೀಳಲಿದೆ. ಮಾ.23ರಿಂದ ಮಾ.30ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಮಾ.31ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 3ರಂದು ನಾಮಪತ್ರ ಹಿಂದಕ್ಕೆ ಪಡೆಯಲು ಅಂತಿಮ ದಿನ. ಏಪ್ರಿಲ್ 17ರಂದು ಮತದಾನ ನಡೆಯಲಿದೆ. ಮೇ 2ರಂದು ಮತಗಳ ಎಣಿಕೆ ನಡೆಯಲಿದ್ದು, ಮೇ 4ಕ್ಕೆ ಚುನಾವಣೆ ನೀತುಸಂಹಿತೆ ಮುಕ್ತಾಯವಾಗಲಿದೆ.
ಘೋಷಣೆಯಾಗಿಲ್ಲ ಅಭ್ಯರ್ಥಿಗಳು
ನಾಮಪತ್ರ ಸಲ್ಲಿಕೆ ಆರಂಭಕ್ಕೆ ಒಂದು ದಿನ ಇರುವಾಗಲೂ ಬೆಳಗಾಿ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ. ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ಮತ್ತು ಬಿಜೆಪಿ ಮಧ್ಯೆ ನೇರ ಸ್ಪರ್ಧೆ ನಡೆಯುವ ಸಾಧ್ಯತೆ ಇದ್ದು, ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಇನ್ನೂ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ.
ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. ಬಿಜೆಪಿಯಿಂದ 30ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಯಾರನ್ನು ಕಣಕ್ಕಿಳಿಸಬೇಕೆನ್ನುವ ತೀರ್ಮಾನ ಇನ್ನೂ ಆಗಿಲ್ಲ.
ಇಂದು ಸಂಜೆ ಅಥವಾ ನಾಳೆಯೊಳಗೆ ಎರಡೂ ಪಕ್ಷಗಳು ಅಧಿಕೃತವಾಗಿ ಅಭ್ಯರ್ಥಿಗಳ ಘೋಷಣೆ ಮಾಡಬಹುದು. ಮೂಲಗಳ ಪ್ರಕಾರ ಶಿವಸೇನೆ ಕೂಡ ತನ್ನ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧರಿಸಿದೆ. ಶಿವಸೇನೆ ಪ್ರಚಾರಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆಗಮಿಸಬಹುದು. ಭಾಷೆ ಮತ್ತು ಗಡಿ ವಿವಾದವನ್ನೇ ಬಂಡವಾಳ ಮಾಡಿಕೊಂಡಿರುವ ಶಿವಸೇನೆ ಮರಾಠಿ ಭಾಷಿಕರ ಮತ ಸೆಳೆಯಲು ಮುಂದಾಗಿದೆ.
ಬೆಳಗಾವಿ ಲೋಕಸಭೆ ಸೇರಿ ಉಪಚುನಾವಣೆ ದಿನಾಂಕ ಪ್ರಕಟ
ತಕ್ಷಣದಿಂದ ಚುನಾವಣೆ ನೀತಿ ಸಂಹಿತೆ ಜಾರಿ: ಮಾ.23ರಿಂದ ನಾಮಪತ್ರ ಸಲ್ಲಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ