ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರುವಂತೆ ಬಿಜೆಪಿ ಹಾಗೂ ಇತರೆ ಪಕ್ಷಗಳು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧದ 100ಕೋಟಿ ರೂಪಾಯಿ ವಸೂಲಿ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಸುಧೀರ್ ಮುಂಗಂಟಿವಾರ ರಾಜ್ಯಪಾಲರನ್ನು ಭೇಟಿಯಾಗಿ ರಾಷ್ಟ್ರಪತಿ ಬಳಿ ಮಹಾರಾಷ್ಟ್ರ ಸರ್ಕಾರ ವಜಾಮಾಡುವಂತೆ ಸಲಹೆ ನೀಡಬೇಕು ಎಂದು ಮನವಿ ಮಾಡಿದ್ದಾಗಿ ತಿಳಿಸಿದ್ದಾರೆ.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಮ್ ದಾಸ್ ಅಠಾವಳೆ, ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮಹಾ ಸರ್ಕಾರ ವಜಾಗೊಳಿಸುವಂತೆ ಮನವಿ ಮಾಡಿದ್ದಾರೆ.
ಮುಖೇಶ್ ಅಂಬಾನಿ ನಿವಾಸ ಎದುರು ಸ್ಫೋಟಕ ಹೊತ್ತಿದ್ದ ಕಾರು ಪತ್ತೆ ಪ್ರಕರಣ ರೋಚಕ ತಿರುವು ಪಡೆದುಕೊಂಡಿದ್ದು, ಅಮಾನತುಗೊಂದಿರುವ ಎ ಎಸ್ ಐ ಸಚಿವ ವಾಜೆ ಬಳಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್, ಬಾರ್ ಮತ್ತು ರೆಸ್ಟೊರೆಂಟ್ ಗಳಿಂದ ಪ್ರತಿ ತಿಂಗಳು 100 ಕೋಟಿ ರ್ ಹಣ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ವೀರ್ ಸಿಂಗ್ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದರು. ಈ ಪ್ರಕರಣ ಇದೀಗ ಮಹಾರಾಷ್ಟ್ರ ಶಿವಸೇನೆ-ಎನ್ ಸಿಪಿ ಮೈತ್ರಿಕೂಟ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ