ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮತ್ತೆ ಆರಂಭವಾಗಿದ್ದು, ಬಳ್ಳಾರಿಯಲ್ಲಿ 14 ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ವಿಮ್ಸ್ ಆಸ್ಪತ್ರೆಯಲ್ಲಿ 100 ವೈದ್ಯಕೀಯ ವಿದ್ಯಾರ್ಥಿಗಳನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಅವರಲ್ಲಿ 14 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.
ಇನ್ನು ಜನರು ಭಯಪಡಬೇಕಾದ ಅಗತ್ಯವಿಲ್ಲ. ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬಳ್ಲಾರಿ ಜಿಲ್ಲಾ ವೈದ್ಯಾಧಿಕಾರಿ ಜನಾರ್ಧನ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ