ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಇಂದು ಮೊದಲ ದಿನ ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ.
ವೆಂಕಟೇಶ್ವರ ಮಹಾಸ್ವಾಮೀಜಿ ಮತ್ತು ಶ್ರೀಕಾಂತ ಪಡಸಲಗಿ ಎನ್ನುವವರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ನಾಮಪತ್ರಗಳನ್ನು ಸ್ವೀಕರಿಸಿದರು.
ಏಪ್ರಿಲ್ 17ರಂದು ನಡೆಯಲಿರುವ ಚುನಾವಣೆಗೆ ಮಂಗಳವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮಾ.30ರ ವರೆಗೂ ನಾಮಪತ್ರ ಸಲ್ಲಿಸಲು ಅವಕಾಶವಿದೆ.
ಕಾಂಗ್ರೆಸ್ ಮತ್ತು ಬಿಜೆಪಿ ಈವರೆಗೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ.
ಉಪಚುನಾವಣೆ: ನಾಳೆಯಿಂದಲೇ ನಾಮಪತ್ರ ಸಲ್ಲಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ