ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬೆಳಗಾವಿ ಉಪಚುನಾವಣೆ ಕ್ಷೇತ್ರಕ್ಕೆ ನಿರೀಕ್ಷೆಯಂತೆಯೇ ಸತೀಶ್ ಜಾರಕಿಹೊಳಿಯೇ ಕಾಂಗ್ರೆಸ್ ಅಭ್ಯರ್ಥಿ ಎಂದು ಘೋಷಿಸಿದರು.
ಕೆಲ ದಿನಗಳ ಹಿಂದೆ ಬೆಳಗಾವಿ ಲೋಕಸಭಾ ಉಪಚುನಾವಣಾ ಕ್ಷೇತ್ರಕ್ಕೆ ಸತೀಶ್ ಜಾರಕಿಹೊಳಿ ಫೈನಲ್ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದೀಗ ಅಧಿಕೃತವಾಗಿ ಸತೀಶ್ ಜಾರಕಿಹೊಳಿ ಹೆಸರನ್ನು ಘೋಷಿಸಿದ್ದಾರೆ.
ಇದೇ ವೇಳೆ ಬಜೆಟ್ ಮೇಲಿನ ಚರ್ಚೆ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದ ಮುಖ್ಯಮಂತ್ರಿಗಳು ತರಾತುರಿಯಲ್ಲಿ 24 ಪುಟಗಳ ಉತ್ತರವನ್ನು ತೆಗೆದುಕೊಂಡು ಬಂದು ಓದಿದ್ದಾರೆ. ಇದು ಹೇಗಿದೆ ಎಂದರೆ ಸಂತೆಯಲ್ಲಿ ಮಾನ ಹೋಗ್ತಿರುವಾಗ ಸೊಪ್ಪು, ಸೊದೆಗಳಿಂದ ಮುಚ್ಚಿಕೊಳ್ಳಲು ಪ್ರಯತ್ನಿಸಿದಂತಿದೆ. ನಾವು ಕೇಳಿದ ಪ್ರಶ್ನೆಗೆ ಉತ್ತರಿಸಿಲ್ಲ. ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ. ಈ ಬಗ್ಗೆಯೂ ಉತ್ತರಿಸಿಲ್ಲ ಎಂದು ಗುಡುಗಿದರು.
ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಅಂತಿಮ: ಅಧಿಕೃತ ಘೋಷಣೆಯಷ್ಟೆ ಬಾಕಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ