Latest

ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಯುವತಿ ನೀಡಿರುವ ಲಿಖಿತ ದೂರು ಆಧರಿಸಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ದೂರಿನಲ್ಲಿ ಯುವತಿ ಗಂಭೀರ ಆರೋಪ ಮಾಡಿದ್ದಳು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ, ಕೆಲಸ ಕೊಡಿಸದೇ ವಂಚನೆ, ಜೀವ ಬೆದರಿಕೆ, ವಿಡಿಯೋ ಕಾಲ್ ಮಾಡಿ ಅಶ್ಲೀಲ ಮಾತುಗಳನ್ನಾಡಿದ್ದಾಗಿ ಯುವತಿ ಆರೋಪಿಸಿದ್ದಳು. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಆದರೆ ಯಾವ ಸೆಕ್ಷನ್ ಅಡಿಯಲ್ಲಿ ಎಂಬುದು ಅಂತಿಮವಾಗಿಲ್ಲ. ಆದರೆ ಯುವತಿ ದೂರಿನಲ್ಲಿ ಉಲ್ಲೇಖಿಸಿದ ಪ್ರಕಾರ ಐಪಿಸಿ ಸೆಕ್ಷನ್ 376 ಸಿ ( ಅಧಿಕಾರ ದುರುಪಯೋಗ ಪಡಿಸಿಕೊಂಡು ಲೈಂಗಿಕ ದೌರ್ಜನ್ಯ -ಲೈಂಗಿಕ ದೌರ್ಜನ್ಯ ಜಾಮೀನು ರಹಿತ ಹಾಗೂ ಗಂಭೀರ ಆರೋಪ ), ಸೆಕ್ಷನ್ 354 (ಜೀವ ಬೆದರಿಕೆ), ಸೆಕ್ಷನ್ 504 (ಮಹಿಳೆಯ ಮಾನಹಾನಿ), ಐಟಿ ಕಾಯ್ದೆ 67 (ಅಶ್ಲೀಲ ವಿಡಿಯೋ ಹರಿಬಿಟ್ಟ ಆರೋಪ) ರ ಅಡಿ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ.

ರಮೇಶ್ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪಗಳನ್ನು ಯುವತಿ ಮಾಡಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವರನ್ನು ಬಂಧಿಸುವ ಸಾಧ್ಯತೆ ಕೂಡ ಇದೆ. ಸಾಕ್ಷ್ಯಾಧಾರ ಸಂಗ್ರಹದ ಬಳಿಕ ತನಿಖಾಧಿಕಾರಿ ಈ ಬಗ್ಗೆ ನಿರ್ಧರಿಸಲಿದ್ದಾರೆ ಎನ್ನಲಾಗಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button