Kannada NewsKarnataka NewsLatest

ಡಾ.ಅಂಬೇಡ್ಕರ್ ವಾದಮಂಡಿಸಿದ ನ್ಯಾಯಾಲಯ ಆವರಣದಲ್ಲಿ ನ್ಯಾಯಾಲಯಗಳ ಸಂಕೀರ್ಣ -ಜೊಲ್ಲೆ

 ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರು ವಾದ ಮಂಡಿಸಿದ ಚಿಕ್ಕೋಡಿಯ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ನ್ಯಾಯಾಲಯ ಆವರಣದಲ್ಲಿ ನ್ಯಾಯಾಲಯಗಳ ಸಂಕೀರ್ಣ ನೂತನ ಕಟ್ಟಡ  ನಿರ್ಮಾಣಕ್ಕೆ  ೩೨ ಕೋಟಿ ರೂಗಳ ಅನುದಾನವನ್ನು ಲೋಕೋಪಯೋಗಿ ಇಲಾಖೆ ಬಿಡುಗಡೆ ಮಾಡಿದೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ಶುಕ್ರವಾರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ೧೯೫ ವರ್ಷಗಳ ಭವ್ಯ ಇತಿಹಾಸ ಹೊಂದಿರುವ ನ್ಯಾಯಾಲಯವಿದ್ದು, ಚಿಕ್ಕೋಡಿಯಲ್ಲಿ ಕಳೆದ ಐದು ವರ್ಷಗಳ ಹಿಂದೆಯಷ್ಟೇ ೭ನೇ ಹೆಚ್ಚುವರಿ ಜಿಲ್ಲಾ ನ್ಯಾಯ್ಯಾಲಯ ಕಾರ್ಯನಿರ್ವಹಿಸುತ್ತಿದೆ.
ಹೀಗಾಗಿ ನ್ಯಾಯಾಲಯ ಕಲಾಪಗಳು ನಡೆಯಲು ನ್ಯಾಯಾಲಯದ ಅವರಣದಲ್ಲಿ ಸಂಕೀರ್ಣದ ಅವಶ್ಯಕತೆ  ಇರುವುದನ್ನು ವಕೀಲರ ಸಂಘದ ಪದಾಧಿಕಾರಿಗಳು  ಹಲವು ವರ್ಷಗಳಿಂದ  ಇರುವ ಬೇಡಿಕೆ ಇರುವುದನ್ನು ತಮ್ಮ ಗಮನಕ್ಕೆ ತಂದಾಗ ತಾವು ಸಿ.ಎಂ. ಬಿ.ಎಸ್.ಯಡಿಯೂರಪ್ಪ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾರಜೋಳ ಅವರ ಗಮನಕ್ಕೆ ತಂದು ೩೨ ಕೋಟಿ ರೂಗಳ ಅನುದಾನವನ್ನು ಮಂಜೂರು ಮಾಡಿಸಿರುವುದಾಗಿ  ತಿಳಿಸಿದರು.
ಈಚೆಗೆ ನಿಪ್ಪಾಣಿಯಲ್ಲಿ ನಡೆದ  ಕಾರ್ಯಕ್ರಮವೊಂದರಲ್ಲಿ ಚಿಕ್ಕೋಡಿ ನ್ಯಾಯವಾದಿಗಳ  ಬೇಡಿಕೆಯನ್ನು  ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರ ಗಮನಕ್ಕೆ ತರಲಾಗಿತ್ತು.ತಮ್ಮ ಮನವಿಯನ್ನು ಪುರಸ್ಕರಿಸಿರುವ ಹಿರಿಯ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಅವರು   ೩೨ ಕೋಟಿ ರೂಗಳ ಅನುದಾನ ಬಿಡುಗಡೆ ಮಾಡುವ ಮೂಲಕ ವಕೀಲರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದಾರೆ.
ಚಿಕ್ಕೋಡಿಯಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣ ಮಾಡಬೇಕೆಂದು ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳ ಮನವಿ ಮೇರೆಗೆ ೧-೧೦-೨೦೧೯ ರಂದು ಸಿ.ಎಂ. ಬಿ.ಎಸ್.ಯಡಿಯೂರಪ್ಪ ಹಾಗೂ ಕಾನೂನು ಸಂಸದಿಯ ಹಾಗೂ ವ್ಯವಹಾರಗಳ ಹಾಗೂ ಸಣ್ಣ ನೀರಾವರಿ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿತ್ತು.
ಸುದ್ದಿಗೋಷ್ಠಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಹಿರಿಯ ವಕೀಲರು  ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button