ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ನಗರದ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ಶುಕ್ರವಾರ ವೈಶಿಷ್ಟ್ಯ ಪೂರ್ವವಾಗಿ ಆಚರಣೆಯಾಗಿದೆ.
ಜಗದ್ಗುರು ರೇಣುಕಾಚಾರ್ಯರ ತತ್ವ, ಆದರ್ಶವನ್ನು ಜನರಿಗೆ ತಿಳಿಸಬೇಕು. ಐದು ದಿನಗಳವರೆಗೆ ಜಗದ್ಗುರು ರೇಣುಕಾಚಾರ್ಯ ಮೂರ್ತಿಯನ್ನು ಪೂಜಿಸಿ ಅವರು ಭೋದಿಸುತ್ತಿರುವ ಸಿದ್ದಾಂತ ಶಿಕಾಮಣಿಯನ್ನು ಜನರಿಗೆ ಮುಟ್ಟಿಸುವ ಕಾರ್ಯವಾಗಬೇಕು. ರೇಣುಕಾಚಾರ್ಯ ತತ್ವಾದರ್ಶವನ್ನು ಸಮಾಜಕ್ಕೆ ಮನವರಿಕೆ ಮಾಡಿಕೊಡುತ್ತಿರಿವ ಕಾರ್ಯ ಮಾಡುತ್ತಿರುವ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರ ಕಾರ್ಯ ಅನನ್ಯ ಎಂದು ಬೇಬಿ ಗ್ರಾಮದ ಶ್ರೀರಂಗಪಟ್ಟಣದ ಶ್ರೀ ಚಂದ್ರವನ ಆಶ್ರಮದ ಶ್ರೀ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಹೇಳಿದರು.
ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಶ್ರೀಮಠದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಸಾರ್ವತ್ರಿಕವಾಗಿ ಆಚರಿಸಲು ರೇಣುಕಾಚಾರ್ಯರ ಮೂರ್ತಿಯನ್ನು ಪ್ರತಿಷ್ಠಾಪನೆ ಐದು ದಿನಗಳ ವರೆಗೆ ವಿಜೃಂಭಣೆಯಿಂದ ಆಚರಿಸಲು ಲೋಕಾರ್ಪಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯ, ದೇಶದಲ್ಲಿ ಆಚರಿಸಲು ಶ್ರೀಮಠ ಪ್ರೇರೇಪಣೆ ನೀಡಲಿದೆ ಎಂದರು.
ಚಂದ್ರವನ ಆಶ್ರಮದ ಗೌರವ ಕಾರ್ಯದರ್ಶಿ ಟಿ.ಪಿ.ಶಿವಕುಮಾರ ದಂಪತಿಗೆ ಆಶೀರ್ವಾದ ನಡೆಯಿತು. ಇದಕ್ಕೂ ಮುನ್ನ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಶ್ರೀಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷೆ ರತ್ನಪ್ರಭಾ ಬೆಲ್ಲದ, ಚಾಮರಾಜ ಸಾಲಿಸವಡಿಮಠ, ವೀರುಪಾಕ್ಷಯ್ಯ ನೀರಲಗಿಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ