Latest

ಲೇಡಿ ಸಿಂಗಂ ಖ್ಯಾತಿಯ ಅರಣ್ಯಾಧಿಕಾರಿ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಿಳಾ ಅರಣ್ಯಾಧಿಕಾರಿ ದೀಪಾಲಿ ಚೌವ್ಹಾಣ್ ಮೊಹೈತ್ ಗುಂಡು ಹಾರಿಸಿಕೊಮ್ಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಮೇಲ್ಘಟ್ ನಲ್ಲಿ ನಡೆದಿದೆ.

ದೀಪಾಲಿ ಚೌವ್ಹಾಣ್ ಲೇಡಿ ಸಿಂಗಂ ಎಂದೇ ಖ್ಯಾತಿ ಪಡೆದಿದ್ದರು. ಮಹಾರಾಷ್ಟ್ರದ ಮೇಲ್ಘಟ ಹುಲಿ ಸಂರಕ್ಷಿತಾರಣ್ಯ (ಎಂಆರ್ ಟಿ)ದ ಆರ್ ಎಫ್ ಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ದೀಪಾಲಿ ಮೃತ ದೇಹದ ಬಳಿ ಡೆತ್ ನೋಟ್ ಕೂಡ ಪತ್ತೆಯಾಗಿದ್ದು, ಇದು ಕೊಲೆಯೋ, ಆತ್ಮಹತ್ಯೆಯೋ ಎಂಬುದು ತನಿಖೆಯಿಂದ ತಿಳಿದುಬಂದಿದೆ.

ದೀಪಾಲಿ ಹರಿಸಾಲ್ ಗ್ರಾಮದಲ್ಲಿನ ಹೆಡ್ ಕ್ವಾರ್ಟರ್ಸ್ ನಲ್ಲಿ ವಾಸವಾಗಿದ್ದರು. ಕ್ವಾರ್ಟರ್ಸ್ ನಲ್ಲಿಯೇ ಸರ್ವಿಸ್ ರಿವಾಲ್ವರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್ನು ಡೆತ್ ನೋಟ್ ನಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿನೋದ್ ಶಿವಕುಮಾರ್ ಕೆಲ ತಿಂಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿನೋದ್ ಶಿವಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಮಾಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಪ್ರತಿಕ್ರಿಯಿಸಿದ್ದು, ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button