ಸರಣಿ ಧಾರಾವಾಹಿ ರೂಪದಲ್ಲಿ ಬಿಡುಗಡೆ ಆಗುತ್ತಿರುವ ಆಡಿಯೋ-ವಿಡಿಯೋಗಳ ಬಗ್ಗೆ ವೈಜ್ಞಾನಿಕ ತನಿಖೆ: ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಆಡಿಯೋ ಮತ್ತು ವಿಡಿಯೋ ಗಳು ಸರಣಿ ಧಾರಾವಾಹಿ ತರಹ ಬರುತ್ತಿವೆ. ಸಿಡಿ, ಆಡಿಯೋ ಮತ್ತು ವಿಡಿಯೋ ಬಗ್ಗೆ ವೈಜ್ಞಾನಿಕವಾಗಿ ತನಿಖೆ ನಡೆಯಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, SIT ತನಿಖೆಯ ದಾರಿ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾವುದೇ ಒತ್ತಡ, ಪ್ರಭಾವಕ್ಕೆ ಒಳಗಾಗದೇ ತನಿಖಾ ತಂಡ ಕೆಲಸ ಮಾಡಲಿದೆ. ಕಾನೂನು ಪ್ರಕಾರ ನಿಷ್ಠೂರವಾಗಿ ನಡೆಯುತ್ತಿರುವ ತನಿಖೆ, ಯಾರ ಪರವೂ ಇಲ್ಲ. ಯಾರ ವಿರೋಧವೂ ಇಲ್ಲ ಎಂದರು.
ಈಗ ಬಿಡುಗಡೆ ಆಗಿರುವ ಆಡಿಯೋ ಮತ್ತು ವಿಡಿಯೋ ಗಳನ್ನು ವೈಜ್ಞಾನಿಕ ವಾಗಿ ಪರಿಶೀಲನೆ ನಡೆಸಲಾಗುವುದು. ಅದರಲ್ಲಿರುವ ಸತ್ಯಾಸತ್ಯತೆ ಅಂಶಗಳನ್ನು ಪರಿಶೀಲಿಸಲಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ರಮೇಶ್ ಜಾರಕಿಹೊಳಿಗೆ ಟ್ರ್ಯಾಕ್ ಹಾಕಿದ್ದು ನಿಜ: ಡಿ.ಕೆ.ಶಿವಕುಮಾರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ