Latest

ಡಿ.ಕೆ.ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ಧ ಬಳಕೆ; ರಮೇಶ್ ಜಾರಕಿಹೊಳಿ ವಿಷಾದ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ಧ ಬಳಕೆ ಮಾಡಿದ್ದಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಷಾದ ವ್ಯಕ್ತಪಡಿಸಿದ್ದಾರೆ.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಪೋಷಕರು ಸುದ್ದಿಗೋಷ್ಠಿಯಲ್ಲಿ ಡಿ.ಕೆಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಯುವತಿ ಪೋಷಕರೇ ನಾನು ನಿರಪರಾಧಿ ಎಂದು ಹೇಳಿಕೆಕೊಟ್ಟಿದ್ದಾರೆ. ಸಿಡಿ ಪ್ರಕರಣದ ಹಿಂದಿನ ಮಹಾನಾಯಕ ಡಿ.ಕೆ.ಶಿವಕುಮಾರ್ ಎಂದು ಹೇಳಿ ಕೆಟ್ಟ ಶಬ್ಧ ಬಳಕೆ ಮಾಡಿದ್ದರು.

Home add -Advt

ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಡಿಕೆಶಿ ವಿರುದ್ಧ ಅವಾಚ್ಯ ಶಬ್ಧ ಬಳಸಿದ್ದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ಜಾರಕಿಹೊಳಿ ತಿಳಿಸಿದ್ದಾರೆ.

ಗೋಕಾಕಲ್ಲಿ ತಮ್ಮನನ್ನು ನಿಲ್ಲಿಸಿ, ಕನಕಪುರದಲ್ಲಿ ಡಿಕೆಶಿ ಸೋಲಿಸುತ್ತೇನೆ – ರಮೇಶ ಜಾರಕಿಹೊಳಿ

Related Articles

Back to top button