ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಇದೀಗ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಕೈವಾಡವಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹಾಗೂ ಯುವತಿ ಪೋಷಕರು ಡಿಕೆಶಿ ವಿರುದ್ಧ ಗಂಭೀರ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಡಿ.ಕೆ.ಶಿವಕುಮಾರ್ ಮನೆ ಮುಂದೆ ಪ್ರತಿಭಟನೆ ನಡೆಸುವ ಸದಹ್ಯತೆ ಇದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಅವರ ಬೆಂಗಳೂರಿನ ಸದಾಶಿವ ನಗರದ ನಿವಾಸಕ್ಕೆ ಸಬ್ ಇನ್ಸ್ ಪೆಕ್ಟರ್ ಗಳ ನೇತೃತ್ವದಲ್ಲಿ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.
ಈ ನಡುವೆ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರು ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಇನ್ನು ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಆರೋಪ, ಅವಾಚ್ಯ ಪದ ಬಳಕೆ ಖಂಡಿಸಿ ಡಿಕೆಶಿ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ರಮೇಶ್ ಜಾರಕಿಹೊಳಿ ನಿವಾಸದ ಎದುರು ಇಂದೂ ಕೂಡ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ನಿನ್ನೆ ಸಂಜೆ ರಮೇಶ್ ಜಾರಕಿಹೊಳಿ ಮುಂದೆ ಸಾವಿರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ನಿವಾಸಕ್ಕೂ ಭದ್ರತೆ ಕಲ್ಪಿಸಲಾಗಿದ್ದು, 2 ಕೆ ಎಸ್ ಆರ್ ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
ಡಿ.ಕೆ.ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ಧ ಬಳಕೆ; ರಮೇಶ್ ಜಾರಕಿಹೊಳಿ ವಿಷಾದ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ