Latest

ಕಾರಿನ ಚಕ್ರ ಸ್ಫೋಟ; ಮಕ್ಕಳೆದುರೇ ತಾಯಿ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಉಡುಪಿ: ಚಲಿಸುತ್ತಿದ್ದ ಕಾರಿನ ಚಕ್ರ ಏಕಾಏಕಿ ಸ್ಫೋಟಗೊಂಡ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಕ್ಕಳೆದುರೇ ಮಹಿಳೆಯೊಬ್ಬರು ಸಾವನ್ನಪ್ಪಿರುವ ಧಾರುಣ ಘಟನೆ ಹೆಮ್ಮಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಸುಹಾನಾ (30) ಮೃತ ಮಹಿಳೆ. ಪತಿ ಹಾಗೂ ಮೂವರು ಮಕ್ಕಳ ಜೊತೆ ಸುಹಾನ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಉಡುಪಿಯ ಹೆಮ್ಮಾಡಿ ಬಳಿ ಬರುತ್ತಿದ್ದಂತೆ ಕಾರಿನ ಮುಂಭಾಗದ ಚಕ್ರ ಸ್ಫೋಟಗೊಂಡು ಕಾರು ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಸುಹಾನರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

Home add -Advt

ಪತಿ ಹಾಗೂ ಮೂವರು ಮಕ್ಕಳಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related Articles

Back to top button