Kannada NewsKarnataka NewsLatest

ಸಿಎಂ ಸೇರಿ ಗಣ್ಯರ ಉಪಸ್ಥಿತಿಯಲ್ಲಿ ಮಂಗಲಾ ಅಂಗಡಿ ನಾಮಪತ್ರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಮಂಗಲಾ ಅಂಗಡಿ ಮಂಗಳವಾರ ನಾಮಪತ್ರ ಸಲ್ಲಿಸಿದರು.

ಗೋವಿಂದ ಕಾರಜೋಳ, ಈಶ್ವರಪ್ಪ ಉಪಸ್ಥಿತಿಯಲ್ಲಿ ಮಂಗಲಾ ಅಂಗಡಿ ನಾಮಪತ್ರ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಕೆ.ಎಸ್.ಈಶ್ವರಪ್ಪ, ಉಮೇಶ ಕತ್ತಿ, ಜಗದೀಶ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲು, ಜಿಲ್ಲೆಯ ಶಾಸಕರು ಉಪಸ್ಥಿತರಿದ್ದರು.

Home add -Advt

 

ನಾಮಪತ್ರ ಸಲ್ಲಿಕೆ ವೇಳೆ ಮಂಗಲಾ ಅಂಗಡಿಗೆ ಡಾ.ಸೋನಾಲಿ ಸರ್ನೋಬತ್ ಸಾತ್

ಮಂಗಲಾ ಅಂಗಡಿ ಕನಿಷ್ಠ 3 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಯಡಿಯೂರಪ್ಪ ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಸುರೇಶ ಅಂಗಡಿಯವರ ಕನಸುಗಳನ್ನು ನನಸು ಮಾಡಲು ಮತ ನೀಡುವಂತೆ ಮಂಗಲಾ ಅಂಗಡಿ ಕೋರಿದರು.

ಸಂಜೆ ಯಡಿಯೂರಪ್ಪ ವಿವಿಧ ಸಮಾಜಗಳ ಮುಖಂಡರ ಸಭೆ ನಡೆಸಿ ಬೆಂಬಲ ಕೋರಿದರು.

ಗಾಂಧಿ ಭವನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆ

Related Articles

Back to top button